ವಿಷ ಸೇವಿಸಿ ರೈತ ಆತ್ಮಹತ್ಯೆ

Published on

ಬಳ್ಳಾರಿ : ಸಾಲದ ಬಾದೆ ತಾಳಲಾರದೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಪ್ಪಗಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ.

ವೀರರೆಡ್ಡಿ (52) ಮೃತ. ಕಳೆದ ವರ್ಷ ಮೆಣಸಿನಕಾಯಿ ಬೆಳೆಗಾಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ನಾಲ್ಕು ಎಕರೆ ಜಮೀನು ಅಡವಿಟ್ಟು ಮೂರವರೆ ಲಕ್ಷ ರೂ. ಹಾಗೂ ಎಂಟು ಲಕ್ಷ ರೂ. ಕೈ ಸಾಲ ಪಡೆದಿದ್ದರು. ಮೆಣಸಿಕಾಯಿ ಬೆಳೆ ಕೈಕೊಟ್ಟಿದ್ದರಿಂದ ಸಾಲಗಾರರ ಕಾಟ ತಾಳಲಾರದೆ ಮನೆಯಲ್ಲಿದ್ದ ರಸಾಯನಿಕ ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದಾನೆ. ಮೃತನಿಗೆ ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net