ಲಂಚದ ಬೇಡಿಕೆಗೆ ದೂರು ಸಲ್ಲಿಸಿ

Published on

ಬಳ್ಳಾರಿ : ಸರ್ಕಾರಿ ಕಚೇರಿಯಲ್ಲಿ ಅಧಿಕಾರಿ, ನೌಕರರು ನ್ಯಾಯಯುತವಾದ ಕೆಲಸವನ್ನು ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟರೆ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದು ಕರ್ನಾಟಕ ಲೋಕಾಯುಕ್ತ ಎಸ್ಪಿ ಸಿ. ಸಿದ್ದರಾಜು ಹೇಳಿದರು.

ನಗರದ ಬಿಐಟಿಎಂ ಕಾಲೇಜಿನಲ್ಲಿ ಕರ್ನಾಟಕ ಲೋಕಾಯುಕ್ತ ಜಿಲ್ಲಾ ವಿಭಾಗ ಕಚೇರಿ, ಬಿಐಟಿಎಂ ಮತ್ತು ಕಿಷ್ಕಿಂದ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ಸೋಮವಾರ ನಡೆದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕ ಕೆಲಸಗಳಿಗಾಗಿ ಸಲ್ಲಿಸಿದ ಅರ್ಜಿಗಳಿಗೆ ಅಧಿಕಾರಿಗಳು ಅನಗತ್ಯ ವಿಳಂಬ ಮಾಡಿದರೆ, ಕಿರುಕುಳ ನೀಡಿದರೂ ದೂರು ಸಲ್ಲಿಸಬಹುದು ಎಂದರು.

ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕ ಹುದ್ದೆಯನ್ನು ಬಳಸಿಕೊಂಡು ಅಕ್ರಮ ಆಸ್ತಿ ಸಂಪಾದಿಸಿದ್ದಲ್ಲಿ ಅಥವಾ ಹುದ್ದೆಯ ದುರ್ಬಳಕೆ ಮಾಡಿಕೊಂಡು ಅವ್ಯವಹಾರ ಮಾಡುತ್ತಿರುವುದು ಕಂಡು ಬಂದಲ್ಲಿ, ನಿಯಮ ಬಾಹಿರ ಆದೇಶ ಅಥವಾ ಕಾರ್ಯ ನಡೆಯುತ್ತಿದ್ದಲ್ಲಿ ಜಿಲ್ಲಾ ಕಚೇರಿ ಅಥವಾ ಮೊ.9364062511, 9364062630 ಗೆ ಸಂಪರ್ಕಿಸಬಹುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕರ್ನಾಟಕ ಲೋಕಾಯುಕ್ತ ಜಿಲ್ಲಾ ವಿಭಾಗದ ಡಿಎಸ್ಪಿ ಆರ್. ವಸಂತ್‌ಕುಮಾರ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net