ಪ್ರಥಮ ಚಿಕಿತ್ಸೆ ಆರೋಗ್ಯಕ್ಕೆ ಅನುಕೂಲ

Published on

ಬಳ್ಳಾರಿ : ಪ್ರಥಮ ಚಿಕಿತ್ಸೆ ಅನಾರೋಗ್ಯ ತಡೆಗಟ್ಟಲು ಹಾಗೂ ವೃತ್ತಿಪರ ವೈದ್ಯಕೀಯ ಸಹಾಯ ಉತ್ತೇಜಿಸಲು ನಿರ್ಣಾಯಕವಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಂ.ಎ.ಶಕೀಬ್ ಹೇಳಿದರು.

ಇಲ್ಲಿನ ವಿಎಸ್‌ಕೆ ವಿವಿಯ ವಿಜ್ಞಾನ ಸಭಾಂಗಣದಲ್ಲಿ ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಿದ್ದ ಪ್ರಥಮ ಚಿಕಿತ್ಸಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಥಮ ಚಿಕಿತ್ಸೆಯು ಆರೋಗ್ಯ ಕಾಪಾಡುವಲ್ಲಿ ಬಹಳ ಪ್ರಮುಖವಾಗಿದೆ. ಆಕಸ್ಮಿಕ ಕಾಯಿಲೆ ಅಥವಾ ಗಾಯಗಳಿಗೆ ತಕ್ಷಣದ ಸಹಾಯದ ಮಹತ್ವ ತಿಳಿಯಬೇಕು. ಇದರಿಂದ ತುರ್ತು ಪರಿಸ್ಥಿತಿಯನ್ನು ಹತೋಟಿಗೆ ತರಬಹುದು ಎಂದು ಹೇಳಿದರು.

ವಿವಿಯ ಕುಲಸಚಿವ ಸಿ.ನಾಗರಾಜು ಮಾತನಾಡಿ, ವಿದ್ಯಾರ್ಥಿಗಳು ಪ್ರಥಮ ಚಿಕಿತ್ಸೆಯ ವಿವಿಧ ಆಯಾಮಗಳನ್ನು ಕಲಿತುಕೊಂಡು ಬೇರೆಯವರಿಗೂ ಕಲಿಸುವ ಕಾರ್ಯವನ್ನು ಮಾಡಬೇಕಾಗಿದೆ. ಪ್ರಥಮ ಚಿಕಿತ್ಸೆಯ ಮಹತ್ವದ ಕುರಿತು ವಿವರಿಸಿದರು.

ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ರಕ್ತ ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ನಿರ್ದಿಷ್ಟ ಪರಿಸ್ಥಿತಿಯನ್ನು ಆಧಾರಸಿ ಪ್ರಥಮ ಚಿಕಿತ್ಸೆಯನ್ನು ನೀಡಬೇಕು. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಲು ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆಯ ಜ್ಞಾನ ಹೊಂದಿರಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net