ಬಳ್ಳಾರಿ : ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಐದು ನಕಲಿ ವೈದ್ಯ ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.
ತಾಲೂಕಿನ ಕಪ್ಪಗಲ್ ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿದರು. ಯಾವುದೇ ವೈದ್ಯಕೀಯ ಪದವಿ ಪಡೆಯದೇ ಔಷಧಿಗಳ ಮಾಹಿತಿ ಹೊಂದಿ ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದರು. ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಡಿಸಿ ಸೂಚನೆ ಮೇರೆಗೆ ದಾಳಿ ನಡೆಸಲಾಗಿತ್ತು. ತಾಲೂಕು ಆರೋಗ್ಯ ಅಧಿಕಾರಿ ತಂಡ ಗ್ರಾಮಕ್ಕೆ ತೆರಳಿ ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಎಸ್‌ಎಸ್‌ಎಲ್‌ಸಿ, ಪಿಯುಸಿ ತನಕ ಓದಿಕೊಂಡು ಜನತೆಗೆ ಚಿಕಿತ್ಸೆ ನೀಡುತ್ತಿದ್ದ ರಾಜಣ್ಣ , ಶೆಕ್ಷಾವಲಿ, ರೆಹಮಾನ್ , ಮಹದೇವ ಮತ್ತು ಗುರು ಕ್ಲಿನಿಕ್‌ಗಳನ್ನು ಸೀಜ್ ಮಾಡಿ ಡಿಸಿ ಅವರ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದರು.
ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬಂದಲ್ಲಿ ಅವರ ವೈದ್ಯಕೀಯ ಪದವಿಯ ಮಾಹಿತಿ ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ಒಂದು ವೇಳೆ ನಕಲಿ ವೈದ್ಯರು ಎಂದು ಕಂಡುಬಂದರೆ ಡಿಎಚ್‌ಒ ಕಾರ್ಯಾಲಯಕ್ಕೆ ದೂರು ನೀಡಬಹುದು. ಕರ್ನಾಟಕ ಖಾಸಗಿ ಆಸ್ಪತ್ರೆಗಳ ಜರುಗಿಸಬಹುದಾಗಿದೆ ಎಂದು ತಿಳಿಸಿದ್ದಾರೆ.