ಇಲಾಖೆಯ ಸೂಕ್ತ ಕ್ರಮ ಅನುಸರಿಸಿ

Published on

ಬಳ್ಳಾರಿ : ಜಿಲ್ಲೆಯಲ್ಲಿ ರೈತರು ಬೆಳೆದಿರುವ ಮೆಣಸಿನಕಾಯಿ ಬೆಳೆಗೆ ತೋಟಗಾರಿಕೆ ಇಲಾಖೆಯಿಂದ ನೀಡಲಾಗುತ್ತಿರುವ ಸೂಕ್ತ ಕ್ರಮ ಅನುಸರಿಸಬೇಕು ಎಂದು ಸಂರಕ್ಷಣಾಧಿಕಾರಿ ಡಾ.ಜಿ.ಟಿ.ಜಯಸಿಂಹ ಹೇಳಿದರು.

ತಾಲೂಕಿನ ಕುರುಗೋಡು ಸೇರಿದಂತೆ ವಿವಿಧ ಗ್ರಾಮಗಳ ಜಮೀನುಗಳಿಗೆ ಪ್ರಾದೇಶಿಕ ಕೇಂದ್ರಿಯ ಸಮಗ್ರ ಸಸ್ಯಪೀಡೆ ನಿರ್ವಹಣಾ ಕೇಂದ್ರ ತಂಡವು ಭೇಟಿ ನೀಡಿ ಮೆಣಸಿನಕಾಯಿ ಬೆಳೆಗಳಿಗೆ ಕೀಟಗಳ ಬಗ್ಗೆ ಪರಿಶೀಲಿಸಿ ಮಾತನಾಡಿದರು. ಹಾಲಿ ಥಿಪ್ಸ್ ನುಸಿಯ ಹಾವಳಿ ಶೇ.50 ಕ್ಕಿಂತ ಅಧಿಕ ಪ್ರದೇಶದಲ್ಲಿ ಕಂಡುಬಂದಿದ್ದು, ಕೀಟದ ಹಾವಳಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು. ಎಲೆಗಳಲ್ಲಿ ಬೂದು ಬಣ್ಣದ ಮಚ್ಚೆ ರೋಗ ಕಂಡುಬಂದಲ್ಲಿ 1 ಗ್ರಾಂ ಕಾರ್ಬಂಡೈಜಿಮ್ ಅಥವಾ 3 ಗ್ರಾಂ ನೀರಿನಲ್ಲಿ ಕರಗುವ ಗಂಧಕ ಒಂದು ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸಬೇಕು. ರೋಗ ಲಕ್ಷಣಗಳು ಕಡಿಮೆಯಾಗದ್ದಿದಲ್ಲಿ ಇದೆ ಸಿಂಪರಣೆಯನ್ನು 15 ದಿನಗಳ ಅಂತರದಲ್ಲಿ ಎರಡು ಬಾರಿ ಕೈಗೊಳ್ಳಬೇಕು ಎಂದು ತಿಳಿಸಿದರು. ಅಗತ್ಯವಿರುವ ನಿರ್ವಹಣಾ ಕ್ರಮಗಳನ್ನು ಪಾಲಿಸಿಕೊಂಡು ರೈತರು ಸಕಾಲದಲ್ಲಿ ಮೆಣಸಿನಕಾಯಿ ಬೆಳೆಗೆ ಔಷಧಿಗಳನ್ನು ಸೂಕ್ತ ರೀತಿಯಲ್ಲಿ ಸಿಂಪಡಿಸಿ ಉತ್ತಮ ಗುಣಮಟ್ಟದ ಇಳುವರಿ ಪಡೆಯಬಹುದು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net