ಮದ್ವೆಯಾದ ಒಂದೇ ತಿಂಗಳಲ್ಲಿ ಉಪವಲಯ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣು

Forest Officer
Published on

ಬಳ್ಳಾರಿ: ಗಣಿನಾಡಿನ ಉಪವಲಯ ಅರಣ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದ್ದು, ಪ್ರಕರಣ ತಡವಾಗಿ ಬಯಲಿಗೆ ಬಂದಿದೆ.

ಬಸವರಾಜ್ ವಿರಾಪುರ (31) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸಂಡೂರು ಪಟ್ಟಣದ ಬಾಡಿಗೆ ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತ ಗಂಗಾವತಿ ತಾಲೂಕು ಜಮಾಪುರ ಗ್ರಾಮದ ಬಸವರಾಜ್, ಮದುವೆಯಾಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ. ಸುಂದರ ವೈವಾಹಿಕ ಜೀವನ ನಡೆಸಬೇಕಾಗಿದ್ದ ಬಸವರಾಜ್ ಮದುವೆಯಾದ ಕೆಲವೇ ದಿನಗಳಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಸಂಬಂಧ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net