ಬಳ್ಳಾರಿ : ಆಯುರ್ವೇದ ಔಷಧಿಗಳನ್ನು ಬಳಸಬೇಕು. ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.
ಇಲ್ಲಿನ ಪಾಲಿಕೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಪೌರ ಕಾರ್ಮಿಕರಿಗಾಗಿ ಗುರುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಪೌರಕಾರ್ಮಿಕರು ಆಯರ್ವೇದ ಔಷಧಿಗಳನ್ನು ಬಳಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ವ್ಯಾದಿ ಪ್ರತಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದಾದ ಔಷಧಿಗಳು ಆಯುರ್ವೇದದಲ್ಲಿ ಇದ್ದು, ಅವುಗಳನ್ನು ನಿಯಮಿತವಾಗಿ ಬಳಸಬೇಕು ಎಂದರು.
ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರದಲ್ಲಿ ಸುಮಾರು 288 ಮಧುಮೇಹ ಮತ್ತು ರಕ್ತ ಛಾಪದ ಪರೀಕ್ಷೆ ಮಾಡಿ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು.