ಶೀಘ್ರದಲ್ಲೇ ಜಿಯೋ ಟ್ಯಾಗ್ ವ್ಯವಸ್ಥೆ

Published on

ಬಳ್ಳಾರಿ : ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಶೀಘ್ರದಲ್ಲಿ ಜಿಯೋ ಟ್ಯಾಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಸಚಿವ ರಹೀಂ ಖಾನ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಬಹುತೇಕ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ತೆರಿಗೆ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ವಸೂಲಿಗೆ ಗಂಭೀರವಾಗಿ ಪರಿಗಣಿಸಿದೆ ಎಂದರು.

ಈ ನಿಟ್ಟಿನಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎಲ್ಲ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯಾದ್ಯಂತ ಏಕರೀತಿಯ ಕರವಸೂಲಾತಿಗೆ ಜಿಯೋ ಟ್ಯಾಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net