ಶಿಶುವಿಗೆ ಪೆಂಟಾವಲೆಟ್ ಲಸಿಕೆ ಹಾಕಿಸಿ

Published on

ಬಳ್ಳಾರಿ; ಜನಿಸಿದ 45 ದಿನಗಳೂಗೆ ಶಿಶುವಿಗೆ ಪೆಂಟಾವಲೆಟ್ ಲಸಿಕೆಯನ್ನು ಹಾಕಿಸಿನ ಮಾರಕ ರೋಗಗಳು ತಡೆಗಟ್ಟಲು ಪಾಲಕರು ಕೈ ಜೋಡಿಸಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶ ಬಾಬು ಹೇಳಿದರು.

ಇಲ್ಲಿನ ದೇವಿನಗರ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ಡಿ.31 ರವರೆಗೆ ಜರುಗುವ ಪೆಂಟಾವಲೆಟ್ ಲಸಿಕೆ ವಿಶೇಷ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಾಲ್ಯದಲ್ಲಿ ಕಂಡು ಬರುವ ಮಾರಕ ಕಾಯಿಲೆಗಳಿಂದ ಮಕ್ಕಳ ಆರೋಗ್ಯದ ದೃಷ್ಟಿಯಿಂದ 12 ಮಾರಕ ರೋಗಗಳಿಗೆ ಸಂಬಂಧಿಸಿದ ಲಸಿಕೆಗಳನ್ನು ಮಕ್ಕಳಿಗೆ ನೆಗಡಿ, ಕೆಮ್ಮು ಸಾಧಾರಣ ಜ್ವರ ಇದ್ದರೂ ಸಹ ಯಾವುದೇ ಹಿಂಜರಿಕೆಯಿಲ್ಲದೆ ಲಸಿಕೆ ಹಾಕಿಸುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ತಪ್ಪದೇ ಪಾಲಕರು ಲಸಿಕೆಗಳನ್ನು ಹಾಕಿಸಬೇಕು ಎಂದು ಕೋರಿದರು.

ಒಂದು ಚುಚ್ಚುಮದ್ದು ನೀಡುವ ಮೂಲಕ 5 ರೋಗಗಳನ್ನು ತಡೆಗಟ್ಟಲು ಸಹಾಯಕವಾಗುವ ಪೆಂಟಾವಲೆಟ್ ಲಸಿಕೆಯನ್ನು ಮಗುವಿನ ಒಂದುವರೆ ತಿಂಗಳು, ಎರಡುವರೆ ತಿಂಗಳು ಹಾಗೂ ಮೂರುವರೆ ತಿಂಗಳು ವಯಸ್ಸಿನ ಅವಧಿಯಲ್ಲಿ ಹಾಕಿಸಬೇಕು.

ಮಕ್ಕಳ ಸದೃಢ ಆರೋಗ್ಯಕ್ಕಾಗಿ ತಪ್ಪದೇ ಲಸಿಕೆಗಳನ್ನು ಹಾಕಿಸಬೇಕು. ಒಂದು ವರ್ಷದ ಒಳಗಡೆ ಮಗುವಿಗೆ ಪೆಂಟಾವಲೆಟ್ ಲಸಿಕೆ ಹಾಕಿಸದೇ ಇದ್ದರೂ ಸಹ ತಪ್ಪದೇ ಲಸಿಕೆ ಹಾಕಿಸಲು ವಿನಂತಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಹನುಮಂತಪ್ಪ ಮಾತನಾಡಿ, ಮಗುವಿಗೆ 9 ತಿಂಗಳು ತುಂಬಿದ ನಂತರ ಮೆದುಳು ಜ್ವರ ರೋಗಕ್ಕೆ ಜಾಪನೀಸ್ ಎನ್ಸ್ಪಲಿಟಿಸ್ ಲಸಿಕೆ, ದಡಾರ ರೂಬೇಲ್ಲಾ ರೋಗಕ್ಕೆ ಮಿಸಲ್ಸ್ ರೂಬೆಲ್ಲಾ ಲಸಿಕೆ ಮತ್ತು ಸಂಜೆಯ ಹೊತ್ತು ಕಂಡುಬರುವ ಇರುಳುಗಣ್ಣು ರೋಗಕ್ಕೆ ವಿಟಾಮಿನ್-ಎ ಅನ್ನಾಂಗ ದ್ರಾವಣ ನೀಡಲಾಗುತ್ತದೆ. ಇವೆಲ್ಲವುಗಳನ್ನು ಮಗುವಿನ ಒಂದು ವರ್ಷದೊಳಗೆ ಹಾಕಲಾಗುತ್ತಿದ್ದು, ಇವುಗಳನ್ನು ತಪ್ಪದೆ ಆರೋಗ್ಯ ಕೇಂದ್ರಗಳಲ್ಲಿ ಪಡೆದುಕೊಳ್ಳಬೇಕು. ಗ್ರಾಮ ವಾರ್ಡ್‌ಗಳಲ್ಲಿ ಪ್ರತಿ ಗುರುವಾರ ಹಾಕುವ ಬಗ್ಗೆ ಹೆಚ್ಚು ಜಾಗೃತಿ ನೀಡಬೇಕು ಎಂದು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net