ಸರ್ಕಾರ ಸೌಲಭ್ಯ ಅರಿವು ಮೂಡಿಸಿ

Published on

ಬಳ್ಳಾರಿ : ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಇರುವ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಅಲ್ಪಸಂಖ್ಯಾತರಿಗೆ ಶೈಕ್ಷಣಿಕ ಅವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಸಮಾನ ಹಂಚಿಕೆ ಮತ್ತು ಜೀವನ ಮಟ್ಟ ಸುಧಾರಣೆಗಾಗಿ ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದರು.

ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಾಗಿ ವಿದ್ಯಾಭ್ಯಾಸಕ್ಕೆ ಒತ್ತು ನೀಡುವುದಿಲ್ಲ. ನಮ್ಮಲ್ಲಿ ಹೆಚ್ಚಾಗಿ ಕೈಗಾರಿಕಾ ವಲಯಗಳಿದ್ದು, ಜಿಟಿಟಿಸಿ, ಐಟಿಐ ಪೂರ್ಣಗೊಳಿಸಿದವರಿಗೆ ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ತರಬೇತಿ ನೀಡಲು ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಕೈಗಾರಿಕೆ ತರಬೇತಿ ಕೇಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಯೋಜನೆ ರೂಪಿಸಬೇಕು ಎಂದು ಸೂಚಿಸಿದರು.

ಯೋಜನೆಗಳ ಹೊರತುಪಡಿಸಿಯೂ ಶಾಲೆಯಿಂದ ಹೊರಗುಳಿಯದಂತೆ ಪೋಷಕರಿಗೆ ಅರಿವು ಮೂಡಿಸಬೇಕು. ಬಾಲ್ಯವಿವಾಹ ಪದ್ಧತಿ, ಮಾದಕ ವಸ್ತುಗಳಿಂದ ದೂರವಿರುವಂತೆ ಅರಿವು ಮೂಡಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು, ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net