ತಪ್ಪಿಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ

Published on

ಬಳ್ಳಾರಿ : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಗಮನಕ್ಕೆ ಬಂದಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ‌ಹೇಳಿದರು.

ಹಗರಿಬೊಮ್ಮನಹಳ್ಳಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾನುವಾರ ಸುದ್ದಿಗಾರರೊಂದಿಗೆ‌ ಮಾತನಾಡಿದರು. ಸದ್ಯದ‌ ಮಟ್ಟಿಗೆ ಯಾರು ತಪ್ಪು ‌ಮಾಡಿದ್ದಾರೆ ಎಂಬುದು ‌ತಿಳಿದಿಲ್ಲ, ಈಗಾಗಲೇ ಅಧಿಕಾರಿಗಳು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದು, ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿದೆ. ಈ ವಿಷಯವನ್ನು ಹಿಂದೂಪರ ಸಂಘಟನೆಗಳು ರಾಜಕೀಯವಾಗಿ ಪ್ರಚೋದಿಸಲು ಪ್ರತಿಭಟನೆ ‌ಮಾಡಲಾಗುತ್ತಿದೆ ಎಂದರು.

ಕಳೆದ ವರ್ಷವೇ ಜಾತಿಗಣತಿ ವರದಿ ಸ್ವೀಕರಿಸಿದ್ದು, ಇದಕ್ಕಾಗಿಯೇ 160 ಕೋಟಿ ರೂ. ವ್ಯಯಿಸಲಾಗಿದೆ. ರಾಜ್ಯದಲ್ಲಿ ಜಾತಿಗಣತಿ ಹಾಗೂ ಮೀಸಲಾತಿ ಜಾರಿ ವಿಚಾರದಲ್ಲಿ ಪರ ಹಾಗೂ ವಿರೋಧ ಚರ್ಚೆ ಇರುವುದು ಸಾಮಾನ್ಯ. ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಸಚಿವ ಜಮೀರ್ ಅಹ್ಮದ್, ಸಂಸದ ಈ.ತುಕಾರಾಮ್ ಇದ್ದರು.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net