ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಆಗ್ರಹ

03112020 Bellary Hadapad cummnity protest
Published on

ಬಳ್ಳಾರಿ: ಹಡಪದ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಮಂಗಳವಾರ ಪ್ರತಿಭಟನೆ ನಡೆಸಿತು.

ಹಡಪದ ಸಮುದಾಯ ಶೈಕ್ಷಣಿಕ, ಆರ್ಥಿಕ, ಸಾವಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಪಾರಂಪರಿಕವಾಗಿ ಕ್ಷೌರಿಕ ವೃತ್ತಿಯನ್ನು ಅವಲಂಭಿಸಿದ್ದು, ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹಡಪದ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕು. ಹಡಪದ ಅಪ್ಪಣ್ಣನವರ ಜನ್ಮಸ್ಥಳ ಮಸೀಬನಾಳ ಹಾಗೂ ತಂಗಡಗಿಯ ಮಠವನ್ನು ಕೂಡಲ ಸಂಗಮ ಪ್ರಾಧಿಕಾರ ವ್ಯಾಪ್ತಿಗೆ ಪಡೆದುಕೊಂಡು ಅಭಿವೃದ್ಧಿಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಂಗಡಗಿಮಠದ ಅನ್ನದಾನಿ ಸ್ವಾಮೀಜಿ, ಸಂದ ಜಿಲ್ಲಾ ಅಧ್ಯಕ್ಷ ಎಚ್.ರುದ್ರಪ್ಪ, ಗೌರವ ಅಧ್ಯಕ್ಷ ಹಳ್ಳದ ಬಸಪ್ಪ, ಸಂಚಾಲಕ ಮಹಾಂತೇಶ, ಪ್ರಧಾನ ಕಾರ್ಯದರ್ಶಿ ಎಚ್.ಶಶಿಕುವಾರ, ಮಹಾಂತೇಶ ಕರೂರು, ತಿಪ್ಪೇಸ್ವಾಮಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net