ಹೇಮರೆಡ್ಡಿ ಮಲ್ಲಮ್ಮ ಜಯಂತಿ ಮೇ 10

Published on

ಬಳ್ಳಾರಿ : ಜಿಲ್ಲಾಡಳಿತ, ಜಿಪಂ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಮೇ 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪಾರ್ವತಿ ನಗರ ಬಡಾವಣೆಯ ಬಸವ ಭವನದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ನಗರದ ಕನಕ ದುರ್ಗಮ್ಮ ದೇವಸ್ಥಾನದಿಂದ ಮೆರವಣಿಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

=====

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net