ಇತಿಹಾಸ ಸಂಶೋಧನೆ ಅಗತ್ಯ

Published on

ಬಳ್ಳಾರ : ಲಾಳಗೊಂಡರ ಇತಿಹಾಸ ಹಂಪಿ ವಿವಿಯ ಮೂಲಕ ಸಂಶೋಧಿಸಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಹೇಳಿದರು.

ನಗರದ ಬಸವಭವನದಲ್ಲಿ ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಲಾಳಗೊಂಡರ ಸಂಘದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕಳೆದ ಸಾಲಿನ ವಿದ್ಯಾರ್ಥಿ ಶೈಕ್ಷಣಿಕ ಪ್ರೋತ್ಸಾಹ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲಾಳಗೊಂಡರಿಗೆ ರಾಜಕೀಯ ಮತ್ತು ಸಾಮಾಜಿಕ ಪ್ರಾತಿನಿಧ್ಯ ಕೊಡುವ ಕೆಲಸವನ್ನು ಒಗ್ಗೂಟ್ಟಿನಿಂದ ಮಾಡೋಣ ಎಂದರು.

ಸಿಎ ಸಿರಿಗೇರಿ ಪನ್ನರಾಜ್ ಮಾತನಾಡಿ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಸಮಾಜವನ್ನು ಮೇಲ್ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಾಗುತ್ತದೆ, ಈ ನಿಟ್ಟಿನಲ್ಲಿ ಕೆಲಸ ಮಾಡೋಣ. ಸಂಘಟಿತ ಹೋರಾಟ ಮಾಡಿದರೆ ನಿರೀಕ್ಷಿತ ಮಟ್ಟದಲ್ಲಿ ಸಾಧನೆ ಸಾಧ್ಯ ಎಂದರು.

ಬಳಿಕ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕಮಕ್ಕೂ ಮುನ್ನ ಎಸ್ಪಿ ವೃತ್ತದಿಂದ ಬಸವಭವನದವರೆಗೆ ದಾಸೋಹಿ ಶಿವಶರಣೆ ಸಿಂಧಿಗೇರಿ ನಿಲಮ್ಮವ್ವ ಜ್ಯೋತಿ ಮೆರವಣಿಗೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net