ಬಜೆಟ್‌ನಲ್ಲಿ ಪಿಂಚಣಿ ಹೆಚ್ಚಿಸಿ

Published on

ಬಳ್ಳಾರಿ ; ಪ್ರಸ್ತಕ ಸಾಲಿನ ಬಜೆಟ್‌ನಲ್ಲಿ ದೇವದಾಸಿ ಮಹಿಳೆಯರಿಗೆ ಮೂರು ಸಾವಿರ ರೂ. ಪಿಂಚಣಿ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಮಂಗಳವಾರ ಪ್ರತಿಭಟಿಸಿತು.

ಜಿಲ್ಲೆಯಲ್ಲಿ ಸರ್ವೆ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಸರ್ವೆ ಹಾಗೂ ಅವರ ಮಕ್ಕಳ ಕುಟುಂಬಗಳ ಸರ್ವೆ ಮಾಡಬೇಕು. ದೇವದಾಸಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 1.50 ಲಕ್ಷ ರೂ. ಹೆಚ್ಚಿಸಬೇಕು. ದೇವದಾಸಿ ಮಹಿಳೆಯರಿಗೆ ನಿವೇಶನ ನೀಡಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ವಾಸ್ತು ಮನೆ ನಿರ್ಮಾಣ ಮಾಡಬೇಕು. ಅಲ್ಲದೆ, ಕೃಷಿ ಚಟುವಟಿಕೆ ಕೈಗೊಳ್ಳಲು ಐದು ಎಕರೆ ನೀರಾವರಿ ಜಮೀನು ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಪ್ರತಿಭಟನ ನಿರತ ಮಹಿಳೆಯರು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net