ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಲಿ

Published on

ಬಳ್ಳಾರಿ ; ಪ್ರೋತ್ಸಾಹ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಿದರು.

ಎಐಯುಟಿಯುಸಿ ಜಿಲ್ಲಾಧ್ಯಕ್ಷೆ ಎಂ.ಗೀತಾ ಮಾತನಾಡಿ, ಏಪ್ರೀಲ್ ತಿಂಗಳಿನಿಂದ ಎಲ್ಲ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ 10 ಸಾವಿರ ರೂ. ಗೌರವಧನ ನೀಡಲಾಗುವುದು. 10 ಸಾವಿರ ರೂ. ಹೊರತುಪಡಿಸಿ, ಕಾಂಪೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್‌ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, 10 ಸಾವಿರ ರೂ. ಗ್ಯಾರಂಟಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಪ್ರಸ್ತಕ ಸಾಲಿನ ಬಜೆಟ್‌ನಲ್ಲಿ ರಾಜ್ಯದ ಸುಮಾರು 2,50,000 ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂ. ಹೆಚ್ಚಿಸಿದಂತೆ 42000 ಆಶಾ ಕಾರ್ಯಕರ್ತೆಯರಿಗೂ 1000 ರೂ. ಹೆಚ್ಚಿಸಿ, ಇದೇ ಬಜೆಟ್‌ನಲ್ಲಿ ಸೇರಿಸಿ ಆದೇಶಿಸಬೇಕು. ಕೂಡಲೇ ಆರೋಗ್ಯ ಸಚಿವರ ಸಮ್ಮುಖದಲ್ಲಿ ಇಲಾಖೆಯಿಂದ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ಮಾಡಿ, ಸುಗಮಕಾರರು ಮತ್ತು 60 ವರ್ಷ ಆದ ಆಶಾ ಕಾರ್ಯಕರ್ತೆಯರನ್ನು ಕೆಲಸವನ್ನು ಕೊನೆಗಾಣಿಸಿರುವುದನ್ನು ಹಿಂತೆಗೆದುಕೊಂಡು ಇನ್ನುಳಿದ ಬಹುದಿನಗಳ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net