ಮೀಸಲಾತಿಗಾಗಿ ಅನಿರ್ದಿಷ್ಟ ಅಹೋರಾತ್ರಿ ಧರಣಿ ಆ.11

Published on

ಬಳ್ಳಾರಿ ; ರಾಜ್ಯ ಸರ್ಕಾರ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ, ಆ.11 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಕರಿಯಪ್ಪ ಗುಡಿಮನಿ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪರಿಶಿಷ್ಟರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಅದ್ಯತೆಯ ಮೇರೆಗೆ ಜಾರಿಗೊಳಿಸಬಹುದು ಎಂಬ ಐತಿಹಾಸಿಕ ತೀರ್ಪು ನ್ಯಾಯಾಲಯ ನೀಡಿದೆ. ಹೀಗಾಗಿ ಆ.11ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಸರ್ವಪಕ್ಷಗಳ ಅನುಮೋದನೆಯೊಂದಿಗೆ ಒಳಮೀಸಲಾತಿ ಬೇಡಿಕೆಯನ್ನು ಅಂಗೀಕರಿಸಿದರೆ, ನೇಮಕಾತಿ ಆಗಬೇಕಾದ 30 ಸಾವಿರಕ್ಕೂ ಅಧಿಕ ಹುದ್ದೆಗಳು ವಂಚಿತ ನಿರುದ್ಯೋಗಿ ಯುವಕ, ಯುವತಿಯರು ಪಡೆಯಬಹುದಾಗಿದೆ. ವಿಷಾದಕರ ಸಂಗತಿ ಎಂದರೆ ಕಳೆದ ಮೂವತ್ತು ವರ್ಷಗಳಲ್ಲಿ ಆಯೋಗ ನೇಮಕವಾಗಲು, ನೇಮಕವಾದ ಆಯೋಗಕ್ಕೆ ಅನುದಾನ ನೀಡಲು , ಸರ್ಕಾರಕ್ಕೆ ಒಪ್ಪಿಸದ ವರದಿಯನ್ನು ಅನುಷ್ಠಾನಗೊಳಿಸಲು ಮೂರು ದಶಕಗಳ ವಿಳಂಬ ಮುಂದುವರೆದಿರುವುದರಿಂದ ನೊಂದ ಸಮುದಾಯಗಳು ಯಾವುದೇ ಸರ್ಕಾರಗಳನ್ನು ನಂಬುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದರು.

ಆದ್ದರಿಂದ, ಅಹೋರಾತ್ರಿ ಧರಣಿಗೆ ಎಲ್ಲ ಸಂಘ, ಸಂಸ್ಥೆಗಳ ಹಾಗೂ ರಾಜಕೀಯ ಮುಖಂಡರು ಪಕ್ಷಾತೀತವಾಗಿ ಈ ಹೋರಾಟದಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.

ಸದಸ್ಯರಾದ ಬಸವರಾಜ್ ಕೌತಳ್, ಅಂಬಣ್ಣ ಅರೋಲಿಕರ್, ಸಣ್ಣ ಮಾರೆಪ್ಪ , ಈಶ್ವರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net