ಸ್ವಾತಂತ್ರೊೃೀತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

Ballari Dc News
ಬಳ್ಳಾರಿಯಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿದರು. ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಎಎಸ್ಪಿ ನಟರಾಜ್, ಎಸಿ ಹೇಮಂತ್ ಕುಮಾರ್, ಎಡಿಸಿ ಮೊಹಮ್ಮದ್ ಜುಬೇರ ಇತರರಿದ್ದರು.
Published on

ಬಳ್ಳಾರಿ: ನಗರದ ವಿಮ್ಸ್ ಮೈದಾನದಲ್ಲಿ ಆ.15ರಂದು ಸ್ವಾತಂತ್ರ್ಯೋತ್ಸವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಅವರು ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಲಿದ್ದಾರೆ. ನಂತರ ಧ್ವಜಾರೋಹಣ ಸಂದೇಶ ನೀಡಲಿದ್ದಾರೆ. ಬೆಳಗ್ಗೆ 8ಕ್ಕೆ ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿ ಬೃಹತ್ ಧ್ವಜಸ್ತಂಭದ ರಾಷ್ಟ್ರಧ್ವಜಾರೋಹಣ ಮಾಡಲಾಗುವುದು. ನಂತರ ವಿಮ್ಸ್ ಆವರಣದಲ್ಲಿನ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಲಾಗುವುದು ಎಂದರು.

ಪೊಲೀಸ್ ಇಲಾಖೆಯು ಪರೇಡ್‌ಗೆ ಸಿದ್ಧತೆ ಮಾಡಿಕೊಳ್ಳಬೇಕು. ಶಾಲಾ ವಿದ್ಯಾರ್ಥಿಗಳಿಗೆ ಪರೇಡ್ ತರಬೇತಿ ನೀಡಬೇಕು. ಉಳಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ತಂಡಗಳಿಗೆ ಪೂರ್ವಭಾವಿ ತರಬೇತಿ ನೀಡಿ ಸಜ್ಜುಗೊಳಿಸಬೇಕು. ಸ್ವಾತಂತ್ರೋತ್ಸವದ ಪ್ರಯುಕ್ತ ಎಲ್ಲ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಅಧಿಕಾರಿಗಳು ಮೊದಲು ಇಲಾಖೆ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಬಳಿಕ ವಿಮ್ಸ್ ಮೈದಾನದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.

ಸ್ವಾತಂತ್ರ್ಯ ಯೋಧರು, ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರು ಸೇರಿದಂತೆ ಎಲ್ಲರಿಗೂ ಸಮರ್ಪಕವಾಗಿ ಆಸನ ವ್ಯವಸ್ಥೆ, ಶಾಲೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಸನ್ಮಾನ, ವಿಶೇಷ ಚೇತನರಿಗೆ ದ್ವಿಚಕ್ರ ವಾಹನ ಹಾಗೂ ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮಗಳಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಎಎಸ್ಪಿ ನಟರಾಜ್, ಎಸಿ ಹೇಮಂತ್ ಕುಮಾರ್, ಎಡಿಸಿ ಮೊಹಮ್ಮದ್ ಜುಬೇರ, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷಾಧಿಕಾರಿ ಪಿ.ಎಸ್.ಮಂಜುನಾಥ, ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net