ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

Published on

ಬಳ್ಳಾರಿ; ಮನೆ ಬಾಡಿಗೆ ಭತ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಲ್ಲಿನ ಡಿಸಿ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ವಸತಿ ಶಾಲೆಗಳ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಿದರು.

ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್‌ಸಿ, ಎಸ್‌ಟಿ, ಒಬಿಸಿ ವಸತಿ ನಿಲಯ ಶಾಲೆಗಳನ್ನೂ ಸಿಬ್ಬಂದಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ಪಡೆಯವುದು. ನಗದು ರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸವುದು. ಮರಣ ಮತ್ತು ನಿವೃತ್ತಿಯ ಉಪದಾನ ಸೌಲಭ ್ಯಒದಗಿಸುವುದು. ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡುವುದು. ಹೆಚ್ಚುವರಿ ಕಾರ್ಯಭಾರ ಇರುವುದರಿಂದ 10% ವಿಶೇಷ ಭತ್ಯೆ ಮಂಜೂರಾತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪರಿಹಾರ ಸಿಕ್ಕಿರುವುದಿಲ್ಲ. ಆದ್ದರಿಂದ, ಸರ್ಕಾರದಿಂದ ಸ್ಪಂದನೆ ನೀಡುವವರೆಗೂ ವಿವಿಧ ಹಂತಗಳಲ್ಲಿ ಸಂವಿಧಾನತ್ಮಕವಾಗಿ ಧರಣಿ ಸತ್ಯಾಗ್ರಹವನ್ನು ಅನಿರ್ಧಿಷ್ಟಾವಧಿವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಕಾರರು ಸರ್ಕಾರಕ್ಕೆ ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net