ಬಳ್ಳಾರಿ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರ‘ಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕ್‌ಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಎಂ.ಸೋಮಸುಂದರ್ ತಿಳಿಸಿದ್ದಾರೆ.
ಹಿಂಗಾರು ಹಂಗಾಮಿನ ಬೆಳೆಗಳಾದ-ಜೋಳ(ನೀ), ಮುಸುಕಿನ ಜೋಳ (ನೀ)- ಡಿ.೧೬ ಮತ್ತು ಕಡಲೆ(ನೀ/ಮ)-ಡಿ.೩೧. ಸೂರ್ಯಕಾಂತಿ (ನೀ/ಮ) ಹಾಗೂ ಕುಸುಮೆ (ಮ)-ಡಿ.೧೬. ಬೇಸಿಗೆ ಬೆಳೆಗಳಾದ ‘ತ್ತ (ನೀ), ನೆಲಗಡಲೆ (ಶೇಂಗಾ), ಸೂರ್ಯಕಾಂತಿ (ನೀ), ಈರುಳ್ಳಿ (ನೀ) ೨೦೨೫ರ ೆ.೨೮ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.