ಜನೌಷಧಿ ಕೇಂದ್ರ ಸ್ಥಳಾಂತರಿಸದಂತೆ ಒತ್ತಾಯ

Published on

ಬಳ್ಳಾರಿ ; ರಾಜ್ಯದ ಜನೌಷಧಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣದಿಂದ ಬೇರಡೆಗೆ ಸ್ಥಳಾಂತರಿಸದಂತೆ ಒತ್ತಾಯಿಸಿ ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಕನ್ನಡ ನಾಡು ರೈತ ಸಂಘದಿಂದ ಎಡಿಸಿಗೆ ಸೋಮವಾರ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಈಶ್ವರಪ್ಪ ಮೆಣಸಿನ ಮಾತನಾಡಿ, ರಾಜ್ಯದ 182 ಕೇಂದ್ರದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಆಸ್ಪತ್ರೆಗಳ ಆವರಣದಿಂದ ಸ್ಥಳಾಂತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕ್ರಮ ರಾಜ್ಯದ ಏಳು ಕೋಟಿ ಜನರ ವಿರೋಧಿ ನೀತಿಯಾಗಿರುತ್ತದೆ. ಬಡವರ, ರೈತರ, ಕೂಲಿ ಕಾರ್ಮಿಕರ ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಔಷಧಿಗಳು ದೊರಯುತ್ತವೆ. ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net