ಅಯೋಧ್ಯ ರಾಮಮಂದಿರ ನಿರ್ಮಾಣಕ್ಕೆ ಬಾಲಕಿಯಿಂದ 11,350 ರೂ. ಸೇವೆ

15012021 Bellary RSS Rama mandir Construction
Published on

ಬಳ್ಳಾರಿ: ನಗರದ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಶುಕ್ರವಾರ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ನಗರದ ಕಲ್ಯಾಣ ಸ್ವಾಮಿ ಮಠದ ಕಲ್ಯಾಣ ಸ್ವಾಮೀಜಿ, ಆರ್‌ಎಸ್‌ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯವಾಹಕ ಪ್ರಸನ್ನ, ಶಾಸಕ ಜಿ.ಸೋಮಶೇಖರರೆಡ್ಡಿ ಕನಕ ದುರ್ಗಮ್ಮ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಧನ್ಯಶ್ರೀ ಎಂಬ ಬಾಲಕಿ ಕಳೆದ ಮೂರು ವರ್ಷಗಳಿಂದ ಸಂಗ್ರಹಿಸಿದ್ದ 11,350 ರೂ.ಯನ್ನು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ನಿರ್ಮಾಣಕ್ಕೆ ಸಮರ್ಪಿಸಿದಳು.

ಆರ್‌ಎಸ್‌ಎಸ್ ಮುಖಂಡರಾದ ಸಂಕಲಚಂದ್ ಬಾಗ್ರೆಚಾ, ನರೇಶ ಚಿರಾನಿ, ಕೈಲಾಸ್ ಬಾಗ್ರೆಚಾ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ರಾಬಕೊ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರ ರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೆನಿವಾಸ ಮೋತ್ಕರ್, ಅನಿಲ್ ನಾಯ್ಡು, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಎಸ್.ಜೆ.ವಿ.ಮಹಿಪಾಲ್, ಗುತ್ತಿಗನೂರು ವಿರೂಪಾಕ್ಷಗೌಡ, ರೈತಮೋರ್ಚಾ ಜಿಲ್ಲಾ ಅಧ್ಯಕ್ಷ ಗಣಪಾಲ ಐನಾಥ ರೆಡ್ಡಿ, ಬಿಜೆಪಿ ನಗರ ಟಕದ ಪ್ರಧಾನ ಕಾರ್ಯದರ್ಶಿ ರಾಮಾಂಜಿನೇಯ, ಮಾಜಿ ಮೇಯರ್ ಬಸವರಾಜ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net