ಕನ್ನಡ ಚಲನಚಿತ್ರ ಗೀತೆಗಳ ಗಾಯನ ಏ.24 ಕಾರ್ಯಕ್ರಮ

Published on

ಬಳ್ಳಾರಿ : ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ ಅಂಗವಾಗಿ ಏ.24 ರಂದು ಸಂಜೆ 05.30 ಗಂಟೆಗೆ ಇಲ್ಲಿನ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಡಾ.ರಾಜ್ ಕುಮಾರ್ ಅವರ ಕುರಿತ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ಅವರ ಅಭಿಮಾನಿಗಳು, ಕನ್ನಡ ಕಲಾಪ್ರೇಮಿಗಳು, ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿ-ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net