ಕನ್ನಡ ಭಾಷೆ ಎಂಬುದು ಸ್ಪೂರ್ತಿ

Published on

ಬಳ್ಳಾರಿ : ಹುತ್ಮಾತ ಪೈಲ್ವಾನ್ ರಂಜಾನ್ ಸಾಬ್ ಅವರು ಕನ್ನಡ ಮತ್ತು ಜೀವ ಎರಡರ ಆಯ್ಕೆಯಲ್ಲಿ ಆರಿಸಿಕೊಂಡಿದ್ದು ಕನ್ನಡ ಎಂಬುದು ಸ್ಪೂರ್ತಿಯ ವಿಚಾರವಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಎನ್.ಯಶವಂತರಾಜ್ ನಾಗಿರೆಡ್ಡಿ ಹೇಳಿದರು,

ಇಲ್ಲಿನ ಸತ್ಯಂ ಶಿಕ್ಷಕರ ಶಿಕ್ಷಣ ಕಾಲೇಜಿನಲ್ಲಿ ಕನ್ನಡ ಸಾಂಸ್ಕ್ರತಿಕ ಪರಿಷತ್ತು ಮಂಗಳವಾರ ಆಯೋಜಿಸಿದ್ದ ಕನ್ನಡ ಅಭಿಮಾನ - ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ನಾಡಿನ ಏಕೀಕರಣಕ್ಕೆ ಮುನ್ನುಡಿ ಬರೆದ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದಿದೆ. ಅನೇಕ ಮಹನೀಯರ ಹೋರಾಟ ಮತ್ತು ತ್ಯಾಗ ಪರಿಶ್ರಮಗಳ ಫಲವಾಗಿದೆ. ಕರ್ನಾಟಕ ಏಕೀಕರಣ ಚಳವಳಿಯು ಸಾವು ಸಂಭವಿಸದ ಹೋರಾಟವಾಗಿದೆ. ಈ ಘಟನೆಯಲ್ಲಿ ಹುತಾತ್ಮರಾದ ರಂಜಾನ್ ಸಾಬ್ ಅವರ ಸಾವು ದುಃಖ ತರಿಸುತ್ತದೆ ಎಂದರು.

ಸಾಹಿತಿ ಸಿದ್ದರಾಮ ಕಲ್ಮಠ ಮಾತನಾಡಿ, ಕನ್ನಡ ಸಂಸ್ಕೃತಿಯ ಜೀವಂತಿಕೆಯನ್ನು ಮುಂದಿನ ತಲೆಮಾರಿಗೆ ತಲುಪಿಸಬೇಕಾದ ಜವಾಬ್ದಾರಿ ಪ್ರತಿ ಕನ್ನಡಿಗರಿಗಿದೆ. ಸಾಮಾನ್ಯ ವ್ಯಕ್ತಿಯೊಬ್ಬ ಅಸಾಮಾನ್ಯವಾಗಿ ಕನ್ನಡ ಪರ ಹೋರಾಟಕ್ಕೆ ಶಕ್ತಿ ತುಂಬಿದರು. ಸಂದಿಗ್ಧ ಕಾಲದಲ್ಲಿ ನಾಡಸೇವೆಗೆ ತಮ್ಮ ಬದುಕನ್ನು ಮುಡಿಪಿಟ್ಟು ಹುತಾತ್ಮರಾದ ರಂಜಾನ್ ಸಾಬ್ ಅವರನ್ನು ಕನ್ನಡಿಗರು ಸದಾ ಸ್ಮರಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net