ಸರ್ಕಾರ ಪರಿಷ್ಕೃತ ವೇತನ ಜಾರಿಗೊಳಿಸಲಿ

Published on

ಬಳ್ಳಾರಿ : ರಾಜ್ಯ ಸರ್ಕಾರ ಹೊರ ಗುತ್ತಿಗೆ ನೌಕರರ ಪರಿಷ್ಕೃತ ವೇತನ ಜಾರಿಗೊಳಿಸಲು ಆಗ್ರಹಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್(ಎಐಯುಟಿಸಿ) ಸಂಯೋಜಿತ ಸಂಘಟನೆಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ಗುತ್ತಿಗೆ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು. ಅಲ್ಲಿವರೆಗೂ ಇಲಾಖೆಗಳಿಂದಲೇ ನೇರವಾಗಿ ವೇತನ ಪಾವತಿಸಿ ಹಾಗೂ ಸೇವಭದ್ರತತೆ ಒದಗಿಸಬೇಕು. ಕಾರ್ಮಿಕರ ವಿವಿದೊದ್ದೇಶ ಸಹಕಾರ ಸಂಘವನ್ನು ರಚಿಸಲು ಕ್ರಮ ಕೈಗೊಳ್ಳಬೇಕು. ಕನಿಷ್ಠ ವೇತನ ಹೆಚ್ಚಳ ಕುರಿತು ರಾಜ್ಯ ಸರ್ಕಾರದ ಅಧಿಸೂಚನೆ ಕೂಡಲೇ ಜಾರಿಗೊಂಡು ಆದೇಶವಾಗಿ ಮಾರ್ಪಾಡಗೊಳ್ಳಬೇಕು. ಜಿಲ್ಲೆಯಲ್ಲಿಯೇ ಸುಸ್ಸಜ್ಜಿತ ಇಎಸ್‌ಐ ಆಸ್ಪತ್ರೆಯನ್ನು ಪ್ರಾರಂಭಿಸಬೇಕು. ಕಾರ್ಮಿಕರಿಗೆ ಹಾಗೂ ಅವರ ಕುಟುಂಬಗಳಿಗೆ ಇಎಸ್‌ಐ ಸೌಲಭ್ಯ ದೊರೆಯುವಂತೆ ಸಮರ್ಪಕ ಕ್ರಮಕೈಗೊಳ್ಳಬೇಕು. ಇಎಸ್‌ಐ ಹಾಗೂ ಪಿಎಫ್ ಸೌಲಭ್ಯದ ಮಿತಿಯನ್ನು ಇಂದಿನ ಬೆಲೆ ಏರಿಕೆ ಅನುಗುಣವಾಗಿ ಹೆಚ್ಚಿಸಬೇಕು. ಎಲ್ಲ ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ 36 ಸಾವಿರ ರೂ. ನಿಗದಿ ಪಡಿಸಬೇಕು ಸೇರಿದಂತೆ ನಾನಾ ಬೇಡಿಕೆಗಳಿಗೆ ಸಂಘಟನಕಾರರು ಒತ್ತಾಯಿಸಿದರು. ಬಳಿಕ ಡಿಸಿ ನಾಗೇಂದ್ರ ಪ್ರಸಾದ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net