ಬಳ್ಳಾರಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಬಿ.ಎಂ.ನಾಗರಾಜ ಹೇಳಿದರು.
ಪಟ್ಟಣದ ತಾಪಂಯ ಸಾಮರ್ಥ್ಯ ಸೌಧದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಸಹ ಗ್ಯಾರಂಟಿ ಯೋಜನೆಗಳ ಬಗ್ಗೆ ತಮ್ಮ-ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು.
ಆಧಾರ್‌ಕಾರ್ಡ್, ರೇಷನ್ ಕಾರ್ಡ್ ಮತ್ತು ಜಿಎಸ್‌ಟಿ ಇತರೆ ತಾಂತ್ರಿಕ ತೊಂದರೆಗಳಿಂದ ವಂಚಿತರಾಗಿರುವ ಅರ್ಹ ಫಲಾನುಭವಿಗಳನ್ನು ಕ್ಷೇತ್ರದಲ್ಲಿ ಗುರುತಿಸಿ ಯೋಜನೆಯ ಸೌಲಭ್ಯವನ್ನು ಒದಗಿಸಲು ಕಾರ್ಯಪ್ರವೃತರಾಗಬೇಕು ಎಂದು ನಿರ್ದೇಶನ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ಗ್ಯಾರಂಟಿಗಳನ್ನು ಹಳ್ಳಿ ಮಟ್ಟದಲ್ಲಿಯೂ ತಲುಪಿಸುವಂತಾಗಲು ಹಾಗೂ ಫಲಾನುಭವಿಗಳು ವಂಚಿತರಾಗಂತೆ ನೋಡಿಕೊಳ್ಳಬೇಕು. ಈ ಕುರಿತು ಸಾಕಷ್ಟು ಪ್ರಚಾರ ನೀಡಬೇಕು ಎಂದರು.