ಬಳ್ಳಾರಿ : ಬೇಸಿಗೆ ಕಾಲ ಆರಂಭವಾಗಿರುವುದರಿಂದ ಕುರುಗೋಡು ತಾಲೂಕಿನ ಎಲ್ಲ ಕೆರೆಗಳಲ್ಲಿ ಕುಡಿಯುವ ನೀರು ಸಂಗ್ರಹಣೆ ಮಾಡಿಕೊಳ್ಳಬೇಕು. ಬೇಸಿಗೆಯಲ್ಲಿ ಕುಡಿಯುವ ನೀರು ಅಭಾವವಾಗದಂತೆ ನೋಡಿಕೊಳ್ಳಬೇಕು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್ ಹೇಳಿದರು.
ಕುರುಗೋಡಿನ ತಾಪಂ ಕಚೇರಿಗೆ ಗುರುವಾರ ಭೇಟಿ ನೀಡಿ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಮುಂದಿನ ದಿನಗಳಲ್ಲಿ ನರೇಗಾ ಯೋಜನೆಯು ಅನುಷ್ಠಾನಗೊಳ್ಳಲಿದೆ. ಇದಕ್ಕೆ ಬೇಕಾದ ಸೂಕ್ತ ಕಾರ್ಯಯೋಜನೆ ರೂಪಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ಅವರು ನಿರ್ದೇಶನ ನೀಡಿದರು.
ಸಭೆಯಲ್ಲಿ ತೆರಿಗೆ ವಸೂಲಾತಿ, ವಸತಿ ಯೋಜನೆ, ಎನ್‌ಆರ್‌ಎಲ್‌ಎಂ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು.