ಬಳ್ಳಾರಿ : ಶರಣ ಸಂತರ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಸವಣ್ಣನವರ ಕಾಲದಲ್ಲಿ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಸಮಾಜದಲ್ಲಿ ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು ಎಂದರು.