ಇಂದು ಮದ್ಯ ಮಾರಾಟ ನಿಷೇಧ

Published on

ಬಳ್ಳಾರಿ : ಹೋಳಿ ಹಬ್ಬ ಮತ್ತು ಕುರುಗೋಡು ಶ್ರೀದೊಡ್ಡ ಬಸವೇಶ್ವರ ಜಾತ್ರೆ ನಿಮಿತ್ತ ಮಾ.14 ರಂದು ಬೆಳಗ್ಗೆ 06 ಗಂಟೆಯಿಂದ ಮಾ.15 ರಂದು ಬೆಳಗ್ಗೆ 06 ಗಂಟೆಯವರೆಗೆ ಜಿಲ್ಲಾದ್ಯಂತ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮತ್ತು ಮದ್ಯ ಅಂಗಡಿ, ಬಾರ್, ರೆಸ್ಟೋರೆಂಟ್‌ಗಳನ್ನು ತೆರೆಯದಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಆದೇಶವು ಡಿಸ್ಟಲರೀಸ್ ರಾಜ್ಯದ ವಿವಿಧ ಕೆಎಸ್‌ಪಿಬಿಸಿಎಲ್ ಡಿಪೋಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net