ಜಯಂತಿ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ

Published on

ಬಳ್ಳಾರಿ : ಜಿಲ್ಲಾಡಳಿತದಿಂದ ಜ.15 ಶಿವಯೋಗಿ ಸಿದ್ದರಾಮೇಶ್ವರ, ಜ.19 ಮಹಾಯೋಗಿ ವೇಮನ ಹಾಗೂ ಜ.21 ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಎಸಿ ಪ್ರಮೋದ್ ಹೇಳಿದರು.

ಇಲ್ಲಿನ ಹೊಸ ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪ್ರತಿ ವರ್ಷದಂತೆ ಈ ಬಾರಿ ವಿವಿಧ ಮಹನೀಯರ ಜಯಂತಿಯನ್ನು ವಿಜೃಂಭಣೆಯಿಂದ ನಡೆಸಲಾಗುತ್ತದೆ. ಜಯಂತಿಯಂದು ಅದ್ದೂರಿ ಮೆರವಣಿಗೆ ಜರುಗುವುದು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಜಯಂತಿ ಕಾರ್ಯಕ್ರಮದಂದು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಲಘು ಉಪಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಹೇಳಿದರು.

ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮಹನೀಯರ ಕುರಿತು ವಿಶೇಷ ಉಪನ್ಯಾಸ, ಆಯಾ ಸಮುದಾಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net