ಬಳ್ಳಾರಿ : ಕೊಪ್ಪಳ ಜಿಲ್ಲೆಯ ಮರಕುಂಬಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ 100 ಅಪರಾಧಿಗಳನ್ನು ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಗೊಳಿಸಲಾಗಿದೆ. ಕಳೆದ ಒಂದು ದಶಕದ ಹಿಂದೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಹಾಗೂ ಸರ್ವಣಿಯರ ನಡುವೆ ಜರುಗಿದ ಜಾತಿ ಸಂಘರ್ಷದಲ್ಲಿ 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆಗ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಪ್ರಕರಣದ ಒಟ್ಟು 100 ಅಪರಾಧಿಗಳನ್ನು ಇಲ್ಲಿನ ಕೇಂದ್ರ ಕಾರಾಗೃಹದ ಹಳೆಯ ಬ್ಯಾರಕ್‌ನಲ್ಲಿ ಇಡಲಾಗಿದೆ ಎಂದು ಮೂಲಗಳು ತಿಳಿಸಿದವು.