ಬಳ್ಳಾರಿಯಲ್ಲಿ ಹುತಾತ್ಮರ ದಿನ ಆಚರಣೆ

30012022 Bellary Martyrs Day
Published on

ಬಳ್ಳಾರಿ: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥ ಭಾನುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪ್ರತಿಮೆ ಎದುರುಗಡೆ ಎರಡು ನಿಮಿಷಗಳ ಕಾಲ ಮೌನಚರಣೆ ಮಾಡಿ ನಮನ ಸಲ್ಲಿಸಲಾಯಿತು.

ಮಹಾತ್ಮಗಾಂಧೀಜಿ ಅವರ ಪ್ರತಿಮೆಗೆ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ್ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಶಿರಸ್ತೇದಾರರಾದ ರವೀಂದ್ರಬಾಬು, ಸುಜಾತಾ, ಜಿಲ್ಲಾಧಿಕಾರಿ ಆಪ್ತ ಸಹಾಯಕ ಮಂಜುನಾಥಗೌಡ, ಕಚೇರಿ ಸಿಬ್ಬಂದಿ ಇಕ್ಬಾಲ್, ಪ್ರಭಾಕರ, ನಿರಂಜನ, ರಾಜೇಶ, ಮೇರಿ, ನಯನಾ, ಅರ್ಚನಾ, ಸುಮಲತಾ, ಮಂಜುಳಾ, ಶೀಲಾ, ಹಸೀನಾ, ಪ್ರವೀಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net