ಸಾಮೂಹಿಕ ವಿವಾಹ ಬಡವರಿಗೆ ವರದಾನ

Published on

ಬಳ್ಳಾರಿ : ಸಾಮಾಜಿಕ ಪಿಡುಗಾಗಿರುವ ಜಾತಿಭೇದ ಹೋಗಲಡಿಸಿ ಸಮಾನತೆ ಸಾರಲು ಉಚಿತ ಸಾಮೂಹಿಕ ವಿವಾಹಗಳು ಸಹಕಾರಿಯಾಗಿವೆ ಎಂದು ಉಚಿತ ಸಾಮೂಹಿಕ ವಿವಾಹದ ಸಾನ್ನಿಧ್ಯವಹಿಸಿದ್ದ ಕರಿಬಸವನ ಗೌಡ ಶರಣರು ಹೇಳಿದರು.

ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಶ್ರೀಅಯ್ಯಪ್ಪ ಸೇವಾ ಸಮಿತಿ ಮತ್ತು ರಾಮ್ಬಾಬು ಗುರುಸ್ವಾಮಿ ಮತ್ತು ಶ್ರೀಅಯ್ಯಪ್ಪಸ್ವಾಮಿ ಶಿಷ್ಯಬಳಗದಿಂದ ಬುಧವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ‌ಮಾತನಾಡಿದರು. ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ ನವವಧೂವರರು ಸಮಾಜದಲ್ಲಿ ಆರ್ದಶ ಜೀವನ ನಡೆಸುವಂತೆ ಸಲಹೆ ನೀಡಿದರು.

ರಾಮ್ಬಾಬು ಗುರೂಜಿ ಮಾತನಾಡಿ, ಅಯ್ಯಪ್ಪ ಸ್ವಾಮಿ ಸೇವಾಸಮಿತಿ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸಿ ಬಡ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿರುವುದು ಉತ್ತಮ ಬೆಳವಣಿಗೆ ಎಂದರು. ಉಚಿತ ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವಜತೆಗೆ ಬಡವ ಶ್ರೀಮಂತ ಎನ್ನುವ ಬೇದಭಾವ ಹೋಗಲಾಡಿಸಲು ಸಹಕಾರಿಯಾಗುತ್ತದೆ ಎಂದರು.

ಐದು ಜೋಡಿ ವಧೂವರರು ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net