ಶೈಕ್ಷಣಿಕ ಪ್ರಗತಿಗೆ ಅನ್ವೇಷಣೆ ಹೆಚ್ಚಾಗಲಿ

Published on

ಬಳ್ಳಾರಿ : ಶೈಕ್ಷಣಿಕ ಪ್ರಗತಿಗೆ ಪೂರಕವಾದ ಹೊಸ ಅನ್ವೇಷಣೆಗಳು ಹೆಚ್ಚಾಗಬೇಕು ಎಂದು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶ ಸಂತೋಷ ಹೆಗಡೆ ಹೇಳಿದರು.

ತಾಲೂಕಿನ ಮೋಕಾದ ಭೈರದೇವನಹಳ್ಳಿಯ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಚಿಕ್ಕಮಗಳೂರಿನ ಯುವಸ್ಪೂರ್ತಿ ಅಕಾಡೆಮಿ ಮತ್ತು ವತಿಯಿಂದ ವಿದ್ಯಾರ್ಥಿಗಳೊಂದಿಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶೈಕ್ಷಣಿಕ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಕೊಡುಗೆ ಅಪಾರವಾಗಿದೆ. ಶಾಲೆಯಲ್ಲಿ ಉತ್ತಮ ವಿಜ್ಞಾನ ಪ್ರಯೋಗಾಯಲವಿದ್ದು, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.

ಬಳಿಕ ಮಕ್ಕಳಿಂದ ವಿಜ್ಞಾನದ ಪ್ರಯೋಗಗಳನ್ನು ಮಂಡಿಸಿ ಚರ್ಚಿಸಿದರು. ಶಾಲೆಯ ವಾತಾವರಣ ಕಂಡು ಹರ್ಷ ವ್ಯಕ್ತಪಡಿಸಿದರು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಾದ, ವಿದ್ಯಾಶ್ರೀ

ಕಲ್ಪನಾ, ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳಿಗೆ ಏಕೆ ಬೇಗ ಶಿಕ್ಷೆಯಾಗುತ್ತಿಲ್ಲ ಮತ್ತು ತಂತ್ರಜ್ಞಾನ ಮುಂದುವರೆದರೂ ರೈತರಿಗೆ ಮತ್ತು ಸಾಮಾನ್ಯ ಜನರಿಗೆ ಸರಿಯಾಗಿ ಸಮಯಕ್ಕೆ ಏಕೆ ಸೌಲಭ್ಯಗಳು ದೊರೆಯುತ್ತಿಲ್ಲ ?. ಮೀಸಲಾತಿಯನ್ನು ಸಂವಿಧಾನದಲ್ಲಿ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ಸೀಮಿತವಾಗಿದೆಯೇ? ಎಂದು ಪ್ರಶ್ನಿಸಿದರು.

ಹೀಗೆ ಹಲವಾರು ವಿದ್ಯಾರ್ಥಿಗಳು ಸುಮಾರು ಪ್ರಶ್ನೆಗಳನ್ನು ಕೇಳಿದರು. ಬಳಿಕ ಸಂತೋಷ ಹೆಗಡೆ ಮಕ್ಕಳ ಪ್ರಶ್ನೆಗಳನ್ನು ಆಲಿಸುತ್ತಾ ಪ್ರಸ್ತುತ ದಿನಮಾನಗಳಲ್ಲಿರುವ ಪರಿಸ್ಥಿತಿಗಳ ಆಧಾರವಾಗಿಟ್ಟುಕೊಂಡು ಸವಿವರವಾಗಿ ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net