ಸಚಿವ ಬಿ.ಎಸ್.ಸುರೇಶ ಜಿಲ್ಲಾ ಪ್ರವಾಸ

Published on

ಬಳ್ಳಾರಿ : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಅವರು ಏ.13 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಏ.13 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 11 ಗಂಟೆಗೆ ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮಕ್ಕೆ ಆಗಮಿಸುವರು. ಬಳಿಕ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 02 ಗಂಟೆೆವರೆಗೆ ಶ್ರೀಭಕ್ತ ಕನಕದಾಸರ ಮತ್ತು ಸಂಗೊಳ್ಳಿ ರಾಯಣ್ಣರ ಪುತ್ಥಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 03 ಗಂಟೆಗೆ ಕಲ್ಲುಕಂಭ ಗ್ರಾಮದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net