ಇಂದು ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಜಿಲ್ಲೆಗೆ ಭೇಟಿ

Published on

ಬಳ್ಳಾರಿ : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅ.15 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಚೇಂಬರ್ ಆಫ್ ಕಾಮರ್ಸ್ ನ ಆವರಣದಲ್ಲಿ ಏರ್ಪಡಿಸಿರುವ ಇಂಕ್ಯುಬೇಶನ್ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬಳಿಕ 11.30 ಕ್ಕೆ ನಗರದ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.

ನಂತರ ಸಂಜೆ 04 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net