ಸಚಿವ ಸುಧಕಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಜೆಡಿಎಸ್‌ನಿಂದ ಪ್ರತಿಭಟನೆ

Ballari JDS Protest
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿದರು.
Published on

ಬಳ್ಳಾರಿ: ವಿಮ್ಸ್‌ನಲ್ಲಿ ರೋಗಿಗಳ ಸಾವು ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಜಿಲ್ಲಾ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ವಿದ್ಯುತ್ ಕಡಿತದಿಂದಾದ ಸಾವು ಪ್ರಕರಣವನ್ನು ಮುಚ್ಚಿಹಾಕಲಿಕ್ಕಾಗಿ ಆಸ್ಪತ್ರೆಗೆ ಭೇಟಿ ನೀಡಿದಾಗ ರೋಗಿಗಳು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ನಿರ್ಲಕ್ಷ ವಹಿಸಿದ ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ, ಕರ್ತವ್ಯ ನಿರತ ಸಿಬ್ಬಂದಿ, ಅಧಿಕಾರಿಗಳು ಹಾಗೂ ವೈದ್ಯರನ್ನು ಕೂಡಲೇ ಅಮಾನತುಗೊಳಿಸಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಘಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಸಮರ್ಥನೆ ಮಾಡಿಕೊಳ್ಳುತ್ತಿದ್ದು ನಾಚಿಕೆಗೇಡಿನ ಸಂಗತಿ. ಹೀಗಾಗಿ ತನಿಖೆಯನ್ನು ನಿಪಕ್ಷಪತವಾಗಿ ನಡೆಸಬೇಕು. ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು ಒತ್ತಾಯಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಹಳ್ಳಿ ತಾಯಣ್ಣ, ಮುಖಂಡರಾದ ಮುನ್ನಾಬಾಯಿ, ತಳವಾರ ದುರುಗಪ್ಪ, ವಿಜಯಕುಮಾರ, ಬಂಡೇಗೌಡ, ಕೋಮಾಲಿ, ಭವನಿ, ಯಶೋಧಾ, ರಾಮೇಶ್ವರಿ, ಪುಷ್ಪಾ, ರಾಘವೇಂದ್ರ, ಚಾಗನೂರು ನಾಗರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net