

ಬಳ್ಳಾರಿ: ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ, ನನಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರ ಇಲ್ಲ ಎಂದು ಹರಪನಹಳ್ಳಿ ಶಾಸಕ ಜಿ.ಕರುಣಾಕರರೆಡ್ಡಿ ಹೇಳಿದರು. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಆಕಾಂಕ್ಷಿಗಳಿಗೆ ಅಸಮಾಧಾನ ಸಹಜ. ಆದರೆ, ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ.
ಬೆಂಗಳೂರಿನಲ್ಲಿ ಪಕ್ಷ ನೋಡಿ ಶಾಸಕರಿಗೆ ಅನುದಾನ ನೀಡಲು ಆಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರಕ್ಕೆ ಸರ್ಕಾರ 200 ಕೋಟಿ ರೂ. ಅನುದಾನ ನೀಡಿರುವುದನ್ನು ಸಮರ್ಥಿಸಿಕೊಂಡರು. ಬೇರೆ ಶಾಸಕರಿಗೆ ನೀಡಿದಷ್ಟೇ ಅನುದಾನ ನನ್ನ ಕ್ಷೇತ್ರಕ್ಕೂ ಬರುತ್ತಿದೆ ಎಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.