ಶಾಸಕ ಸತೀಶ್ ಜಾರಕಿಹೊಳಿಯನ್ನು ಬಂಧಿಸುವಂತೆ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

091122 Ballari BJP Protest Satish Jarakihole
ಶಾಸಕ ಸತೀಶ್ ಜಾರಕಿಹೊಳಿಯನ್ನು ಬಂಧಿಸುವಂತೆ ಆಗ್ರಹಿಸಿ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
Published on

ಬಳ್ಳಾರಿ: ಹಿಂದು ಆಶ್ಲೀಲ ಪದ ಎಂದು ಹೇಳಿಕೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ರಾಯಲ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಪಕ್ಷ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದು ಧಾರ್ಮಿಕ ವಿಚಾರಗಳು ಮತ್ತು ಹಿಂದು ಪದ ಅಶ್ಲೀಲ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಇವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಈ ಹಿಂದೆ ನೂಪುರ ಶರ್ಮನನ್ನು ಬಿಜೆಪಿ ಅಮಾನತು ಮಾಡಿತ್ತು. ಅದರಂತೆ, ಕಾಂಗ್ರೆಸ್ ಕೂಡ ಸತೀಶ್ ಜಾರಕಿಹೊಳಿಯ ಮೇಲೆ ಕ್ರಮ ತೆಗೆದುಕೊಳ್ಳುವ ಧೈರ್ಯ ಮಾಡಲಿ ಎಂದರು.

ಬಳಿಕ ಕಾಂಗ್ರೆಸ್ ಹಾಗೂ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗುತ್ತ ರಾಯಲ್ ವೃತ್ತದಿಂದ ಎಸ್‌ಪಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ, ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಪ್ರಕರಣ ದಾಖಲಿಸಬೇಕೆಂದು ಎಸ್ಪಿ ರಂಜಿತ್‌ಕುಮಾರ ಪ್ರತಿಭಟನಕಾರರು ಮನವಿ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಮುರಹರಗೌಡ, ರಾಜ್ಯ ಜವಳಿ ಅಭಿವೃದ್ಧ್ದಿ ನಿಗಮದ ಅಧ್ಯಕ್ಷ ಗೂತ್ತಿಗನೂರು ವಿರೂಪಾಕ್ಷಪ್ಪ, ಜಿಲ್ಲಾ ಉಪಾಧ್ಯಕ್ಷ ವೀರಶೇಖರ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅಶೋಕ್ ಕುಮಾರ್, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಮಾಧ್ಯಮ ಸಹ ಸಂಚಾಲಕ ರಾಜೀವ್ ತೊಗರಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುಗುಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net