ರಾಷ್ಟ್ರೀಯ ಲೋಕ ಅದಾಲತ್ ಸೆ.13

Published on

ಬಳ್ಳಾರಿ : ರಾಷ್ಟ್ರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆ.13 ರಂದು ಮೂರನೇ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಿ.ಪ್ರಮೋದ್ ಹೇಳಿದರು.

ನಗರದ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅವಳಿ ಜಿಲ್ಲೆಯ 31 ನ್ಯಾಯಾಲಯಗಳಲ್ಲಿ ಬಗೆಹರಿಸಬಹುದಾದ ವಿವಿಧ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ನ್ಯಾಯಾಲಯದ ಶುಲ್ಕ ಮರು ಪಾವತಿಸಲಾಗುತ್ತದೆ ಎಂದರು.

ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಾನೆಲ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿದೆ. ಸೆ.12 ರ ವರೆಗೆ ಈ ರಿಯಾಯಿತಿ ಸೌಲಭ್ಯವು ಇರಲಿದೆ. ಸೆ.13ಕ್ಕೆ ನಡೆಯಲಿರುವ ಲೋಕ ಅದಾಲತ್ ಪ್ರಯುಕ್ತ ಈ ರಿಯಾಯಿತಿ ನೀಡಲಾಗಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿ, ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಮತ್ತು ದುರ್ಬಲ ವರ್ಗದ ಜನರಿಗೆ ಕಾನೂನಿನ ನೆರವು ನೀಡಲು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ಹಲವು ಯೋಜನೆ ಜಾರಿಗೆ ತಂದಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net