ರಾಷ್ಟ್ರೀಯ ಗಣಿತ ದಿನಾಚರಣೆ

Published on

ಬಳ್ಳಾರಿ: ನಗರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಬೆಂಗಳೂರು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಪಂ ಸಹಯೋಗದೊಂದಿಗೆ ಡಿ.23 ರಂದು ಬೆಳಗ್ಗೆ 10.15 ಗಂಟೆಗೆ ರಾಷ್ಟ್ರೀಯ ಗಣಿತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಕೆಪಿಎಸ್ ಶಾಲೆಯ ಮುಖ್ಯಶಿಕ್ಷಕ ಎ.ಬೈರಪ್ಪ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net