ಬಳ್ಳಾರಿ : ನಗರದ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕೆಎಎಸ್ ಅಧಿಕಾರಿ ಪಿ.ಎಸ್. ಮಂಜುನಾಥ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮಂಜುನಾಥ ಅವರು ಬಳ್ಳಾರಿ ಜಿಲ್ಲಾ ಖನಿಜ ಪ್ರತಿಷ್ಠಾನದ ವಿಶೇಷಧಿಕಾರಿಯಾಗಿದ್ದರು. ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಖಲೀಲ್ ಸಾಬ್ ಅವರಿಗೆ ಬಳ್ಳಾರಿ ಅಭಿವೃದ್ಧಿ ಪ್ರಾಧಿಕಾರ (ಬುಡಾ)ದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ಸದ್ಯ, ಅವರು ಬುಡಾ ಆಯುಕ್ತರಾಗಿ ಮುಂದುವರಿಯಲಿದ್ದಾರೆ.