ಬಳ್ಳಾರಿ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ನಾಗೇಂದ್ರ ಪ್ರಸಾದ್ ಕೆ. ಅವರನ್ನು ನೇಮಕಗೊಳಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್ ಆದೇಶ ಹೊರಡಿಸಿದ್ದಾರೆ. ಇವರು ಬೆಂಗಳೂರಿನ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಈ ಹಿಂದೆ ಬಳ್ಳಾರಿ ಡಿಸಿಯಾಗಿದ್ದ ಪ್ರಶಾಂತ ಕುಮಾರ ಮಿಶ್ರಾ ಅವರನ್ನು ಸ್ಥಳ ನಿಯುಕ್ತಿಗೊಳಿಸದೆ ವರ್ಗಾವಣೆಗೊಳಿಸಲಾಗಿದೆ.