ದರೋಜಿ-ಗಂಗಾವತಿ ಮಾರ್ಗಕ್ಕೆ ಅನುದಾನ ಕೊಡಿ: ಸರ್ಕಾರಕ್ಕೆ ಶಾಸಕ ಜಿ.ಸೋಮಶೇಖರರೆಡ್ಡಿ ಪತ್ರ

03102020 G Somashekhar Reddy
Published on

ಬಳ್ಳಾರಿ: ಗಂಗಾವತಿ ಹಾಗೂ ದರೋಜಿ ನಡುವೆ ನೂತನ ರೈಲು ಮಾರ್ಗ ನಿರ್ಮಿಸಬೇಕು. ಇದಕ್ಕಾಗಿ ರಾಜ್ಯದ ಪಾಲಿನ ಅನುದಾನ ನೀಡಬೇಕೆಂದು ಶಾಸಕ ಜಿ.ಸೋಮಶೇಖರರೆಡ್ಡಿ, ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಗಂಗಾವತಿ ಹಾಗೂ ದರೋಜಿ ನಡುವೆ 32 ಕಿಮೀ ರಸ್ತೆ ಮಾರ್ಗವಿದೆ. ರೈಲು ಮಾರ್ಗ 25 ಕಿಮೀ ಅಂತರವಾಗಬಹುದು. ಈ ಮಾರ್ಗದಿಂದ ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳಿಗೆ ನೇರ ಸಂಪರ್ಕ ಸಾಧ್ಯವಾಗಲಿದೆ.

ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ವಾಣಿಜ್ಯ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ಆಂಧ್ರಪ್ರದೇಶದ ಶ್ರೆಶೈಲ ಹಾಗೂ ತಿರುಪತಿಗೆ ಹೋಗುವ ಭಕ್ತರಿಗೂ ಅನುಕೂಲವಾಗಲಿದೆ. ಗಂಗಾವತಿ-ರಾಯಚೂರು ರೈಲ್ವೆ ಮಾರ್ಗದ ಕಾಮಗಾರಿ ತ್ವರಿತಗತಿಯಲ್ಲಿ ನಡೆದಿದೆ. ಈ ಮಾರ್ಗದಲ್ಲಿ ಬಳ್ಳಾರಿ ಜಿಲ್ಲೆಯ ಜನರು ಹೈದರಾಬಾದ್‌ಗೆ ಹೋಗಲು ನೆರವಾಗಲಿದೆ. ಈ ಹಿನ್ನೆಲೆಯಲ್ಲಿ ಗಂಗಾವತಿ-ದರೋಜಿ ರೈಲ್ವೆ ಮಾರ್ಗದ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಶಾಸಕ ಸೋಮಶೇಖರ ರೆಡ್ಡಿ ಕೋರಿದ್ದಾರೆ.

ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಹಾಗೂ ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ.ಯಾದವ್ ಅವರಿಗೂ ಪತ್ರ ಬರೆದು ಬೇಡಿಕೆಗೆ ಸ್ಪಂದಿಸಬೇಕೆಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net