ಬಳ್ಳಾರಿ ; ಸಿಎಂ ಸಿದ್ದರಾಮಯ್ಯ ಅವರು ಸದ್ಯಕ್ಕೆ ಸಂಪುಟ ಪುನಾರಚನೆಯಿಲ್ಲ ಎಂಬುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ , ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಡಾ.ಶರಣ ಪ್ರಕಾಶ್ ಆರ್.ಪಾಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಸಾಮಾನ್ಯವಾಗಿ ಔತಣಕೂಟಕ್ಕೆ ಕರೆದಿದ್ದರಿಂದ ಹೋಗಿದ್ದೇವೆ. ಸಭೆಯಲ್ಲಿ ರಾಜಕೀಯ ಚರ್ಚೆಯಾಗಿಲ್ಲ. ಮಾಧ್ಯಮದವರು ಅಂದುಕೊಂಡತೆ ಏನು ಆಗಿಲ್ಲ. ಸದ್ಯಕ್ಕೆ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆಯಿಲ್ಲ, ಎಲ್ಲವೂ ಮಾಧ್ಯಮದ ಸೃಷ್ಟಿ ಎಂದರು.
ರಾಷ್ಟ್ರೀಯ ಸ್ವಯಂ ಸೇವಕ ( ಆರ್ ಎಸ್ ಎಸ್ ) ಸಂಘವನ್ನು ನಿಷೇಧಿಸಿ ಎಂಬುದಾಗಿ ಸಚಿವ ಪ್ರಿಯಾಂಕ ಖರ್ಗೆ ಎಲ್ಲಿಯೂ ಹೇಳಿಲ್ಲ. ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳ ನಡೆಯದಂತೆ ಕ್ರಮವಹಿಸಿ ಎಂದು ಸಿಎಂ ಗೆ ಪತ್ರ ಬರೆದಿದ್ದಾರೆ. ಸಚಿವ ಮನವಿ ಮೇರೆಗೆ ಸರ್ಕಾರದ ಅಧೀನ ಕಾರ್ಯದರ್ಶಿಗೆ ಶಿಫಾರಸು ಮಾಡಿದ್ದಾರೆ. ಇದರ ಬಗ್ಗೆ ಕೆಲವರಿಂದ ಬೆದರಿಕೆ ಕರೆಗಳು ಬರುತ್ತಿದೆ. ಅಂತಹವರಿಗೆ ಅವಶ್ಯಕತೆ ಇದ್ದರೆ ಸರ್ಕಾರದಿಂದ ಹೆಚ್ಚುವರಿ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು.