ಕೃಷಿ ಬೆಳೆಗಳಿಗೆ ವಿಮೆ ಮಾಡಿಕೊಳ್ಳಲು ಸೂಚನೆ

Published on

ಬಳ್ಳಾರಿ: ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರ‘ಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ತಮ್ಮ ವಿವಿ‘ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಕೊಳ್ಳಬೇಕು. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ.

ನೋಂದಣಿ: ಕುಸುಮೆ, ಜೋಳ, ಸೂರ್ಯಕಾಂತಿ, ಮೆಕ್ಕೆ ಜೋಳ ಬೆಳೆಗಳಿಗೆ ಡಿ.೧೬ ಕೊನೆಯ ದಿನ. ಕಡಲೆ ಬೆಳೆಗೆ ಡಿ.೩೧ ಕೊನೆಯ ದಿನವಾಗಿದೆ.

ಕರ್ನಾಟಕ ರೈತ ಸುರಕ್ಷಾ ಪ್ರ‘ಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ವಿಮಾ ಸಂಸ್ಥೆಯ ತಾಲ್ಲೂಕು ಪ್ರತಿನಿಗೆ (೭೯೯೬೪೫೩೨೪೧) ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಎಂ., ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net