ನರೇಗಾ ಕೂಲಿ 370 ರೂ. ಹೆಚ್ಚಳ

Published on

ಬಳ್ಳಾರಿ; ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯು ಏ.01 ರಿಂದ 370 ರೂ. ಗೆ ಹೆಚ್ಚಳವಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವ 349 ರೂ. ಗಳಿಂದ 370 ರೂ. ಗಳಿಗೆ ಪರಿಷ್ಕರಿಸಿ ಏ.01 ರಿಂದ ಆರ್ಥಿಕ ವರ್ಷ 2025-26 ನೇ ಸಾಲಿಗೆ ಅನ್ವಯವಾಗುವಂತೆ ಪಾವತಿಸಲು ಕ್ರಮವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net