ಸಮೀಕ್ಷೆಗೆ ಅಧಿಕಾರಿಗಳು ಅಸಕ್ತಿವಹಿಸಿ

Published on

ಬಳ್ಳಾರಿ : ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಜಿಲ್ಲೆಯು ಹಿಂದುಳಿದಿದೆ. ಎಲ್ಲ ಸಮೀಕ್ಷಾದಾರರು ಹೆಚ್ಚಿನ ಆಸಕ್ತಿವಹಿಸಿ ಕಾರ್ಯ- ಕ್ಷಮತೆ ತೋರಿಸಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.

ನಗರದ ಡಿಸಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದ ಕುರಿತು ಶುಕ್ರವಾರ ಆಯೋಜಿಸಿದ್ದ ಪಗ್ರತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯಕ್ಕೆ ನೇಮಿಸಿದ ಬಹಳಷ್ಟು ಗಣತಿದಾರರು(ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು) ಕ್ಷೇತ್ರಮಟ್ಟದಲ್ಲಿ ಹೋಗಿ ಮೊಬೈಲ್ ಮೂಲಕ ಲಾಗಿನ್ ಆಗದೇ ಹಾಗೂ ಸಮೀಕ್ಷೆಗೆ ತೆರಳದೇ ಇರುವುದು ಕಂಡುಬಂದಿದೆ. ಈ ಕೂಡಲೇ ಅವರನ್ನು ಸಂಪರ್ಕಿಸಿ, ನಿರ್ದೇಶನ ನೀಡಬೇಕು. ಇಲ್ಲವಾದಲ್ಲಿ ಅಂತಹವರ ಮೇಲೆ ಕ್ರಮ ಜರುಗಿಸಬೇಕು ಎಂದರು.

ಸಮೀಕ್ಷಾ ಕಾರ್ಯಕ್ಕೆ ಕಾಲಾವಕಾಶ ಕಡಿಮೆಯಿದೆ. ಗಣತಿದಾರರು, ಸೂಪರ್ ವೈಸರ್, ಮಾಸ್ಟರ್ ಟ್ರೈನರ್ ಹಾಗೂ ಬಿಇಒಗಳು ಕಡ್ಡಾಯವಾಗಿ ಭಾಗವಹಿಸಿ ನಿಗದಿತ ಸಮಯಕ್ಕೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಿ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಸಮೀಕ್ಷಾ ಕಾರ್ಯದಲ್ಲಿ ಮನೆ ಗುರುತಿಗೆ ಸಂಬಂಧಿಸಿದಂತೆ, ಹಳ್ಳಿಯಿಂದ ಹಳ್ಳಿಗೆ ಸಂಚಾರಕ್ಕೆ ಸಮಸ್ಯೆಯಾದಲ್ಲಿ, ಊಟ, ಕುಡಿವ ನೀರು ಸೇರಿದಂತೆ ಯಾವುದೇ ಮೂಲಸೌಕರ್ಯಗಳಿಗೆ ಆಯಾ ಗ್ರಾಮಗಳ ಗ್ರಾಮ ಸಹಾಯಕರು ಸಹಾಯ ಮಾಡಲಿದ್ದಾರೆ. ಮೊಬೈಲ್‌ನಲ್ಲಿ ಯಾವುದೇ ರೀತಿಯ ತಾಂತ್ರಿಕ ದೋಷ ಕಂಡುಬಂದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ಸಮೀಕ್ಷೆ ಮುಗಿಯುವರೆಗೆ ಹಬ್ಬ, ಶಾಲಾ ರಜೆ ಸೇರಿದಂತೆ ಯಾವುದೇ ರೀತಿಯ ರಜೆಯಿಲ್ಲ. ಸಮೀಕ್ಷೆ ವೇಳೆ ನೆಟ್‌ವರ್ಕ್ ಸಮಸ್ಯೆ ಕಂಡುಬರುವ ಹಳ್ಳಿಗಳನ್ನು ಗುರುತಿಸಿ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೆ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಶಿಬಿರ ಆಯೋಜಿಸಲಾಗುತ್ತದೆ. ಸಿಬ್ಬಂದಿ, ಸಾಮಗ್ರಿಗಳನ್ನು ಒದಗಿಸಿಕೊಡಲಾಗುವುದು ಎಂದು ಹೇಳಿದರು.

ಸಂಡೂರು ತಾಲೂಕಿನ ತೋರಣಗಲ್ ಗ್ರಾಮದ ಜಿಂದಾಲ್ ಟೌನ್‌ಶಿಪ್, ವಡ್ಡು, ಶಂಕರ ಗುಡ್ಡ ಕಾಲನಿಗಳಲ್ಲಿ ಸಮೀಕ್ಷಾದಾರರಿಗೆ ಪ್ರವೇಶ ನೀಡದಿರುವುದರ ಕುರಿತು ಕಂಪನಿಯ ಮುಖ್ಯಸ್ಥರಿಗೆ ಆದೇಶ ರವಾನಿಸಿ ತಹಸೀಲ್ದಾರ್‌ಗೆ ಸೂಚಿಸಿದರು.

ಪ್ರತಿದಿನ ಬಿಇಒ ಹಾಗೂ ಸೂಪರ್ ವೈಸರ್ ಗಳ ಮೇಲ್ವಿಚಾರಣೆ ನಡೆಸಬೇಕು. ಪ್ರತಿಯೊಬ್ಬರ ಸಹಕಾರ-ಸಹಭಾಗಿತ್ವದಿಂದ ಜಿಲ್ಲೆಯನ್ನು ಟಾಪ್ ಐದು ಜಿಲ್ಲೆಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರಿಸುವ ಮೂಲಕ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದರು.

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಜಿಲ್ಲೆಯು ಹಿಂದುಳಿದಿದೆ. ಎಲ್ಲ ಸಮೀಕ್ಷಾದಾರರು ಹೆಚ್ಚಿನ ಆಸಕ್ತಿವಹಿಸಿ ಕಾರ್ಯ- ಕ್ಷಮತೆ ತೋರಿಸಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.

ನಗರದ ಡಿಸಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದ ಕುರಿತು ಶುಕ್ರವಾರ ಆಯೋಜಿಸಿದ್ದ ಪಗ್ರತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯಕ್ಕೆ ನೇಮಿಸಿದ ಬಹಳಷ್ಟು ಗಣತಿದಾರರು(ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು) ಕ್ಷೇತ್ರಮಟ್ಟದಲ್ಲಿ ಹೋಗಿ ಮೊಬೈಲ್ ಮೂಲಕ ಲಾಗಿನ್ ಆಗದೇ ಹಾಗೂ ಸಮೀಕ್ಷೆಗೆ ತೆರಳದೇ ಇರುವುದು ಕಂಡುಬಂದಿದೆ. ಈ ಕೂಡಲೇ ಅವರನ್ನು ಸಂಪರ್ಕಿಸಿ, ನಿರ್ದೇಶನ ನೀಡಬೇಕು. ಇಲ್ಲವಾದಲ್ಲಿ ಅಂತಹವರ ಮೇಲೆ ಕ್ರಮ ಜರುಗಿಸಬೇಕು ಎಂದರು.

ಸಮೀಕ್ಷಾ ಕಾರ್ಯಕ್ಕೆ ಕಾಲಾವಕಾಶ ಕಡಿಮೆಯಿದೆ. ಗಣತಿದಾರರು, ಸೂಪರ್ ವೈಸರ್, ಮಾಸ್ಟರ್ ಟ್ರೈನರ್ ಹಾಗೂ ಬಿಇಒಗಳು ಕಡ್ಡಾಯವಾಗಿ ಭಾಗವಹಿಸಿ ನಿಗದಿತ ಸಮಯಕ್ಕೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಿ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಸಮೀಕ್ಷಾ ಕಾರ್ಯದಲ್ಲಿ ಮನೆ ಗುರುತಿಗೆ ಸಂಬಂಧಿಸಿದಂತೆ, ಹಳ್ಳಿಯಿಂದ ಹಳ್ಳಿಗೆ ಸಂಚಾರಕ್ಕೆ ಸಮಸ್ಯೆಯಾದಲ್ಲಿ, ಊಟ, ಕುಡಿವ ನೀರು ಸೇರಿದಂತೆ ಯಾವುದೇ ಮೂಲಸೌಕರ್ಯಗಳಿಗೆ ಆಯಾ ಗ್ರಾಮಗಳ ಗ್ರಾಮ ಸಹಾಯಕರು ಸಹಾಯ ಮಾಡಲಿದ್ದಾರೆ. ಮೊಬೈಲ್‌ನಲ್ಲಿ ಯಾವುದೇ ರೀತಿಯ ತಾಂತ್ರಿಕ ದೋಷ ಕಂಡುಬಂದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ಸಮೀಕ್ಷೆ ಮುಗಿಯುವರೆಗೆ ಹಬ್ಬ, ಶಾಲಾ ರಜೆ ಸೇರಿದಂತೆ ಯಾವುದೇ ರೀತಿಯ ರಜೆಯಿಲ್ಲ. ಸಮೀಕ್ಷೆ ವೇಳೆ ನೆಟ್‌ವರ್ಕ್ ಸಮಸ್ಯೆ ಕಂಡುಬರುವ ಹಳ್ಳಿಗಳನ್ನು ಗುರುತಿಸಿ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೆ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಶಿಬಿರ ಆಯೋಜಿಸಲಾಗುತ್ತದೆ. ಸಿಬ್ಬಂದಿ, ಸಾಮಗ್ರಿಗಳನ್ನು ಒದಗಿಸಿಕೊಡಲಾಗುವುದು ಎಂದು ಹೇಳಿದರು.

ಸಂಡೂರು ತಾಲೂಕಿನ ತೋರಣಗಲ್ ಗ್ರಾಮದ ಜಿಂದಾಲ್ ಟೌನ್‌ಶಿಪ್, ವಡ್ಡು, ಶಂಕರ ಗುಡ್ಡ ಕಾಲನಿಗಳಲ್ಲಿ ಸಮೀಕ್ಷಾದಾರರಿಗೆ ಪ್ರವೇಶ ನೀಡದಿರುವುದರ ಕುರಿತು ಕಂಪನಿಯ ಮುಖ್ಯಸ್ಥರಿಗೆ ಆದೇಶ ರವಾನಿಸಿ ತಹಸೀಲ್ದಾರ್‌ಗೆ ಸೂಚಿಸಿದರು.

ಪ್ರತಿದಿನ ಬಿಇಒ ಹಾಗೂ ಸೂಪರ್ ವೈಸರ್ ಗಳ ಮೇಲ್ವಿಚಾರಣೆ ನಡೆಸಬೇಕು. ಪ್ರತಿಯೊಬ್ಬರ ಸಹಕಾರ-ಸಹಭಾಗಿತ್ವದಿಂದ ಜಿಲ್ಲೆಯನ್ನು ಟಾಪ್ ಐದು ಜಿಲ್ಲೆಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರಿಸುವ ಮೂಲಕ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net