ಅಹೋರಾತ್ರಿ ಧರಣಿ ಆ. 12ರಿಂದ ಪ್ರಾರಂಭ

Published on

ಬಳ್ಳಾರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಆ. 12 ರಿಂದ ಆ.14ರವರೆಗೆ ರಾಜ್ಯಾದ್ಯಂತ ಜಿಲ್ಲಾಮಟ್ಟದ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷೆ ಗೀತಾ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ಗೌರವಧನ ಹಾಗೂ ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ಹತ್ತು ಸಾವಿರ ರೂ. ಗ್ಯಾರಂಟಿಯನ್ನು ಈ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯ ನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ನಗರ ಆಶಾಗಳಿಗೆ ರೂ. ಎರಡು ಸಾವಿರ ಗೌರವಧನ ಹೆಚ್ಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮೂರು ದಿನಗಳವರೆಗೆ ಧರಣಿ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಕೂಡಲೇ ಬೇಡಿಕೆ ಈಡೇರಿಸಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಚ್ಚರಿಸಿದರು.

ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ.ಎನ್.ಪ್ರಮೋದ್, ಗೌರವಾಧ್ಯಕ್ಷೆ ಎ.ಶಾಂತಾ, ಜಿಲ್ಲಾ ಕಾರ್ಯದರ್ಶಿ ಮಾಣಿಕ್ಯ ಇದ್ದರು.

==

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net