ಮಕ್ಕಳ ತಜ್ಞ ವೈದ್ಯ ಅಪಹರಣ

Published on

ಬಳ್ಳಾರಿ : ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧಡೆ ದರೋಡೆ, ಎಟಿಎಂ ಕಳವು ಸೇರಿದಂತೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲೇ ಜಿಲ್ಲೆಯಲ್ಲಿ ಬೆಳ್ಳಂ ಬೆಳಗ್ಗೆಯೇ ವೈದ್ಯರನ್ನು ಅಪಹರಣ ನಡೆಸಿರುವ ಘಟನೆ ಬೆಚ್ಚಿ ಬೀಳಿಸಿದೆ.

ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞ ವೈದ್ಯ ಡಾ.ಸುನಿಲ್ ಎಂಬುವವರನ್ನು ದುಷ್ಕರ್ಮಿಗಳು ಇಲ್ಲಿನ ಸತ್ಯನಾರಾಯಣ ಪೇಟೆಯ ಶನಿದೇವರ ದೇವಸ್ಥಾನ ಬಳಿ ಶನಿವಾರ ಬೆಳಗ್ಗೆ ಅಪಹರಿಸಿದ್ದಾರೆ. ಸುನೀಲ್ ಮೊಬೈಲ್‌ನಿಂದಲೇ ಅವರ ಸಹೋದರ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಗುಪ್ತ ಎಂಬುವವರಿಗೆ ಕರೆ ಮಾಡಿರುವ ಅಪಹರಣಕಾರರು ಮೂರು ಕೋಟಿ ರೂ. ನಗದು ಹಾಗೂ ಮೂರು ಕೋಟಿ ರೂ. ಮೌಲ್ಯದ ಚಿನ್ನಾಭರಣ ಸೇರಿ ಒಟ್ಟು ಆರು ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಪೊಲೀಸರು ಅಪಹರಣಕಾರರು ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವಡೆ ಸಿಸಿ ಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ನಗರದ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಚಲಾಯಿಸಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ಜಿಲ್ಲೆಯ ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ತನಿಖೆಯಲ್ಲಿ ತೊಡಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net